SHARE

ಕರ್ನಾಟಕದಲ್ಲಿರುವ ಅತ್ಯಂತ ಪವಿತ್ರವಾದ ನಾಗರೂಪದಲ್ಲಿರುವ ಸುಬ್ರಹ್ಮಣ್ಯಸ್ವಾಮಿಯ ದೇವಸ್ಥಾನವಿರುವ ಕ್ಷೇತ್ರ ಎಂದರೆ ಈ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಎನ್ನಬಹುದು.  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ ಇದಾಗಿದೆ.

Image result for kukke subramanya

ಜಾತಕಗಳಲ್ಲಿನ ಹಲವಾರು ದೋಷ ಪರಿಹಾರ ಇಲ್ಲಿ ಮಾಡಿಸಿಕೊಳ್ಳಬಹುದು
ಜಾತಕಗಳಲ್ಲಿನ ಸರ್ಪದೋಷ ಅಥವಾ ನಾಗದೋಷ, ಕಾಳಸರ್ಪದೋಷ ಇತ್ಯಾದಿ ದೋಷಗಳ ಕಾರಣದಿಂದ ಅನಾರೋಗ್ಯ, ತಡವಿವಾಹ, ವೈವಾಹಿಕ ಸುಖಭಂಗ, ಪುತ್ರಹೀನತೆ (ಗಂಡು ಸಂತಾನ ಇಲ್ಲದಿರುವುದು),ಸಂತಾನಹೀನತೆ (ಮಕ್ಕಳೇ ಆಗದಿರುವುದು,ಉದ್ಯೋಗದಲ್ಲಿ ಅಸಮಾಧಾನ,ಇತ್ಯಾದಿ ತೊಂದರೆಗಳನ್ನು ಅನುಭವಿಸುತ್ತಿರುವವರ ಈ ಮೇಲೆ ಹೇಳಲಾದ ದೋಷಗಳಿಗೆ ಪರಿಹಾರ ಮಾಡಿಸಲು ಕರ್ನಾಟಕದಲ್ಲಿರುವ ಅತ್ಯಂತ ಪವಿತ್ರವಾದ ನಾಗರೂಪದಲ್ಲಿರುವ ಸುಬ್ರಹ್ಮಣ್ಯಸ್ವಾಮಿಯ ದೇವಸ್ಥಾನವಿರುವ ಕ್ಷೇತ್ರ ಎಂದರೆ ಈ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ.

Related image

ಈ ಕ್ಷೇತ್ರಕ್ಕೆ ಪ್ರಪಂಚದ ನಾನಾ ಮೂಲೆಗಳಿಂದ ಭಕ್ತರು ಬಂದು ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ, ಇತ್ಯಾದಿ ಸೇವೆ ಸಲ್ಲಿಸಿ ದೋಷಮುಕ್ತರಾಗಿ ಸುಖಜೀವನ ನಡೆಸುತ್ತಿದ್ದಾರೆ. ಕುಜದೋಷವಿರುವವರೂ ಸಹಾ ಇಲ್ಲಿ ಪರಿಹಾರ ಕಾಣುತ್ತಾರೆ. ಕಾರ್ತಿಕೇಯ, ಸುಬ್ರಹ್ಮಣ್ಯ ಎಂದೆಲ್ಲಾ ಕರೆಸಿಕೊಳ್ಳುವ ಈ ದೇವನು ಕ್ಷೀರಪ್ರಿಯನು. ಭಕ್ತರ ದೋಷಗಳನ್ನು ಪರಿಹಾರ ಮಾಡುವ ಸಲುವಾಗಿಯೇ ಈ ಕ್ಷೇತ್ರದಲ್ಲಿ ನೆಲೆಸಿದ್ದಾನೆ ಎಂದರೆ ತಪ್ಪಾಗಲಾರದು.

NO COMMENTS

LEAVE A REPLY